ಆಗಸ್ಟ್ 06, 2026
ಬೆಂಗಳೂರು: ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳ ನಿಯಮಿತ (ಕಾವೇರಿ ಹ್ಯಾಂಡ್ಲೂಮ್ಸ್) ರವರ ಸಂಯುಕ್ತಾಶ್ರಯದಲ್ಲಿ 12ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ – 2026 ಮತ್ತು ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ಈ ವಿಶೇಷ ಕಾರ್ಯಕ್ರಮವು ಆಗಸ್ಟ್ 7, 2026 ಶುಕ್ರವಾರದಂದು ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ವಿವರಗಳು:
ದಿನಾಂಕ: 07-08-2026 (ಶುಕ್ರವಾರ)
ಸಮಯ: ಬೆಳಿಗ್ಗೆ 11:00 ಗಂಟೆಗೆ
ಸ್ಥಳ: ಕೊಂಡಜ್ಜಿ ಬಸಪ್ಪ ಆಡಿಟೋರಿಯಂ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರ ಕಛೇರಿ, ನಂ.39, ಶಾಂತಿಗೃಹ, ಪ್ಯಾಲೇಸ್ ರಸ್ತೆ, ಬೆಂಗಳೂರು - 560001.
ಕೈಮಗ್ಗ ವಲಯದ ಅಭಿವೃದ್ಧಿ, ನೇಕಾರರ ಶ್ರಮವನ್ನು ಗೌರವಿಸುವುದು ಹಾಗೂ ಅತ್ಯುತ್ತಮ ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಪ್ರೋತ್ಸಾಹಿಸುವುದು ಈ ಸಮಾರಂಭದ ಮುಖ್ಯ ಉದ್ದೇಶವಾಗಿದೆ.
Tags
ಇತರ ಅಪ್ಲಿಕೇಶನ್ಗಳಿಗೆ ಹಂಚಿಕೊಳ್ಳಿ

