ಆಗಸ್ಟ್ 06, 2026
ಬೆಂಗಳೂರು:
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ಶಾಖಾಧಿಕಾರಿ (Branch Officer) ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
📌 ಹುದ್ದೆಗಳ ವಿವರ:
ಒಟ್ಟು ಹುದ್ದೆಗಳು: 20
ಉಳಿಕೆ ಮೂಲ ವೃಂದ (RPC): 18 ಹುದ್ದೆಗಳು
ಕಲ್ಯಾಣ ಕರ್ನಾಟಕ ವೃಂದ (KK): 02 ಹುದ್ದೆಗಳು
📅 ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 20 ಜುಲೈ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಆಗಸ್ಟ್ 2026 (ರಾತ್ರಿ 11:59 ಗಂಟೆಯವರೆಗೆ)
🔗 ಅರ್ಜಿ ಸಲ್ಲಿಸುವ ಮತ್ತು ಹೆಚ್ಚಿನ ವಿವರಗಳ ವೆಬ್ಸೈಟ್:
ವಯೋಮಿತಿ, ವಿದ್ಯಾರ್ಹತೆ, ವೇತನ ಶ್ರೇಣಿ, ಪರೀಕ್ಷಾ ಪದ್ಧತಿ ಮತ್ತು ಅರ್ಜಿ ಶುಲ್ಕದ ಸಂಪೂರ್ಣ ವಿವರಗಳಿಗಾಗಿ ಕೆಳಗಿನ ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಬಹುದು:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA):
👉 cetonline.karnataka.gov.in/kea/indexnew
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ:
👉 karnataka.nalsa.gov.in
ಗಮನಿಸಿ: ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಶೀಘ್ರವಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
Tags
ಇತರ ಅಪ್ಲಿಕೇಶನ್ಗಳಿಗೆ ಹಂಚಿಕೊಳ್ಳಿ

