ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ (e-KYC) ಗಡುವು ಅಕ್ಟೋಬರ್ 20ರವರೆಗೆ ವಿಸ್ತರಣೆ: ಸಚಿವ ರಿಝ್ವಾನ್ ಅರ್ಷದ್ ಮಹತ್ವದ ಆದೇಶ
ಬೆಂಗಳೂರು: ಸರ್ವರ್ ದೋಷ ಹಾಗೂ ತಾಂತ್ರಿಕ ಸಮಸ್ಯೆಯಿಂದಾಗಿ ರೇಷನ್ ಕಾರ್ಡ್ ಇ-ಕೆವೈಸಿ (e-KYC) ಮಾಡಿಸಲು ಪರದಾಡುತ್ತಿದ್ದ ರಾಜ್ಯದ ಜನಸಾಮಾನ್ಯರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ರಿಝ್ವಾನ್ ಅರ್ಷದ್ ಅವರು ದೊಡ್ಡ ನೆಮ್ಮದಿ ನೀಡಿದ್ದಾರೆ. ಇ-ಕೆವೈಸಿ ಮಾಡಿಸಲು ಅಂತಿಮ ಗಡುವನ್ನು ಅಕ್ಟೋಬರ್ 20, 2026 ರವರೆಗೆ ವಿಸ್ತರಿಸಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಸುದ್ದಿಯ ಮುಖ್ಯಾಂಶಗಳು:
ಮಾಧ್ಯಮಗಳ ವರದಿಗೆ ತಕ್ಷಣ ಸ್ಪಂದನೆ: ತಾಂತ್ರಿಕ ದೋಷಗಳಿಂದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲು ಸಾರ್ವಜನಿಕರು ಎದುರಿಸುತ್ತಿರುವ ಸಂಕಷ್ಟಗಳು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಗಮನಕ್ಕೆ ಬಂದ ಕೂಡಲೇ ಸಚಿವರು ಎಚ್ಚೆತ್ತುಕೊಂಡು ಈ ಆದೇಶ ಹೊರಡಿಸಿದ್ದಾರೆ.
ಬಡವರ ಹಕ್ಕಿಗೆ ಧಕ್ಕೆಯಾಗಬಾರದು: ತಾಂತ್ರಿಕ ಕಾರಣಗಳಿಂದಾಗಿ ಯಾವುದೇ ಬಡ ಕುಟುಂಬವೂ ತನ್ನ ಹಕ್ಕಿನ ಆಹಾರ ಧಾನ್ಯದಿಂದ (ಅನ್ನಭಾಗ್ಯ ಇತ್ಯಾದಿ) ವಂಚಿತರಾಗಬಾರದು ಎಂಬುದು ಸರ್ಕಾರದ ದೃಢ ನಿಲುವು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಆತಂಕ ಬೇಡ - ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ: ಸಾರ್ವಜನಿಕರು ಯಾರೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಸರ್ವರ್ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಸಾರ್ವಜನಿಕರಿಗೆ ಮನವಿ: ಫಲಾನುಭವಿಗಳು ಯಾವುದೇ ಗೊಂದಲಕ್ಕೀಡಾಗದೆ, ನಿಗದಿತ ಗಡುವಿನೊಳಗೆ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಲಾಗಿದೆ.
ಜನಸಾಮಾನ್ಯರ ಹಿತರಕ್ಷಣೆ ಮತ್ತು ಅನುಕೂಲಕ್ಕಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸದಾ ಬದ್ಧVವಾಗಿ ಕಾರ್ಯಪ್ರವೃತ್ತವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಶೇಷ ವರದಿ: ಕರುನಾಡ ಬಲ ನ್ಯೂಸ್